ಹಾಸನ ಜಿಲ್ಲೆ ಅರಸೀಕೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಗಾಗಿ ಸಿಎಂ ಆಪ್ತರ ಮಧ್ಯೆ ಫೈಟ್
ಅರಸೀಕೆರೆ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಭ್ಯರ್ಥಿಯಾಗಿ ಜಿವಿಟಿ ಬಸವರಾಜ್ ಹೆಸರನ್ನು ಅಂತಿಮಗೊಳಿಸಲಾಗಿತ್ತು. ಆದರೆ ಆಪ್ತರಿಗೆ ಹುದ್ದೆ ಕೊಡಿಸಲು ಸಂತೋಷ್ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎಂದು ಸಂತೋಷ್ ವಿರುದ್ದ ಆರೋಪಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ, ಸಂತೋಷ್ ತಾನೇ ಅರಸೀಕೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಬಂತೆ ಓಡಾಡುತ್ತಿದ್ದಾರೆ ಎಂದು ಸಂತೋಷ್ ನಡೆ ವಿರುದ್ಧ ಕೆಲ ಜಿಲ್ಲೆಯ ಬಿಜೆಪಿ ಮುಖಂಡರು ರಾಜ್ಯ ನಾಯಕರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.