ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐ ವಹಿಸುವವರೆಗೂ ಹೋರಾಟ: ಸ್ನೇಹಮಯಿ ಕೃಷ್ಣ

Sampriya

ಶುಕ್ರವಾರ, 27 ಸೆಪ್ಟಂಬರ್ 2024 (18:19 IST)
Photo Courtesy X
ಚಾಮರಾಜನಗರ: ಮುಡಾ ಹಗರಣ ಸಂಬಂಧ ನ್ಯಾಯಾಲಯದ ಆದೇಶದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್‌ ದಾಖಲಾಗುತ್ತಿದ್ದ ಹಾಗೇ ಇದೂ ಪ್ರಾಮಾಣಿಕ ಹೋರಾಟಕ್ಕೆ ಸಂದ ಜಯ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದರು.

ಚಾಮರಾಜನಗರದ ಕರುಣಾಕರ ಎಂಬುವರಿಗೆ ಹಣ ವಂಚನೆ ಎಸಗಿದ ಪ್ರಕರಣ ಸಂಬಂಧ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾದ ಬಳಿಕ ಮಾತನಾಡಿದ ಸ್ನೇಹಮಯಿ ಕೃಷ್ಣ, ಈ ಪ್ರಕರಣದಿಂದ ಒಬ್ಬ ಸಾಮಾನ್ಯ ಪ್ರಜೆ ಕೂಡಾ ಸಿಎಂ ವಿರುದ್ಧ ಕಾನೂನು ಹೋರಾಟ ಮಾಡಬಹುದು ಎಂಬುದು ಪ್ರಕರಣದಿಂದ ಸಾಬೀತಾಗಿದೆ.

ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿದ್ದರೂ ಲೋಕಾಯುಕ್ತ ಎಸ್‌ಪಿ ಉದೇಶ್ ನ್ಯಾಯಾಲಯದ ಆದೇಶಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ. ಮೇಲಾಧಿಕಾರಿಗಳ ಒತ್ತಡ ಹಾಗೂ ಆದೇಶದ ಬಳಿಕವಷ್ಟೆ ಎಫ್‌ಐಆರ್‌ ಮಾಡಿದ್ದು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದಾರೆ. ಪ್ರಕರಣವನ್ನು ಸಿಬಿಐಗೆ ವಹಿಸುವವರೆಗೂ ಹೋರಾಟ ಮಾಡಿ, ಸೋಮವಾರ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದರು.

ಅನ್ಯರ ವಿರುದ್ಧ ಭ್ರಷ್ಟಾಚಾರ ಆರೋಪಗಳು ಕೇಳಿ ಬಂದಾಗ ರಾಜೀನಾಮೆಗೆ ಪಟ್ಟುಹಿಡಿಯುತ್ತಿದ್ದ ಸಿದ್ದರಾಮಯ್ಯ ತಮ್ಮ ವಿರುದ್ಧವೇ ದೂರು ದಾಖಲಾದಾಗ ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟುಹಿಡಿಯುವುದು ವಿಪರ್ಯಾಸ. ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ