ಉದಯನಿಧಿ, ಪ್ರಿಯಾಂಕ್ ಖರ್ಗೆ ವಿರುದ್ಧ ಕೇಸ್ ದಾಖಲು
ಸನಾತನ ಧರ್ಮವನ್ನು ಕಿತ್ತೊಗೆಯಬೇಕು ಎಂದು ಕರೆ ನೀಡಿದ್ದ ಸಚಿವ ಉದಯನಿಧಿ ಸ್ಟಾಲಿನ್ ಅವರ ವಿರುದ್ಧ ದೇಶಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗಿದೆ.ಹಾಗೂ ಈ ಹೇಳಿಕೆಯನ್ನು ಬೆಂಬಲಿಸಿದ್ದ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧವೂ ಬಿಜೆಪಿ ನಾಯಕರು ಕಿಡಿ ಕಾರಿದ್ದಾರೆ. ಇದೀಗ ಉದಯನಿಧಿ ಸ್ಟಾಲಿನ್ ಹಾಗೂ ಪ್ರಿಯಾಂಕ್ ಖರ್ಗೆ ವಿರುದ್ಧ ಉತ್ತರ ಪ್ರದೇಶದಲ್ಲಿ ಎಫ್ಐಆರ್ ದಾಖಲಾಗಿದೆ. ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಮಾಜಿ ನ್ಯಾಯಾಧೀಶರು ಮತ್ತು ಅಧಿಕಾರಿಗಳು ಸೇರಿದಂತೆ 260ಕ್ಕೂ ಹೆಚ್ಚು ಗಣ್ಯರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದರು. ಅದರ ಬೆನ್ನಲ್ಲೇ ಉತ್ತರ ಪ್ರದೇಶದ ರಾಂಪುರದಲ್ಲಿ ಸನಾತನ ಧರ್ಮ ಹೇಳಿಕೆಗೆ ಸಂಬಂಧಿಸಿದಂತೆ ಕೇಸ್ ದಾಖಲಿಸಲಾಗಿದೆ.