ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ: ಕರಂದ್ಲಾಜೆ ಕಿಡಿ

ಗುರುವಾರ, 31 ಆಗಸ್ಟ್ 2017 (13:45 IST)
ಮಹಾರಾಷ್ಟ್ರಕ್ಕೆ ಜೈ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಕಾಂಗ್ರೆಸ್ ಪಕ್ಷದ ಮಹಿಳೆ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ.
ಕನ್ನಡದ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ನಿಜವಾದ ಕಾಳಜಿಯಿದ್ದರೆ, ಕನ್ನಡ ಭಾಷೆಯ ಬಗ್ಗೆ ಗೌರವಿದ್ದರೆ ಸಿಎಂ ಸಿದ್ದರಾಮಯ್ಯ, ಹೆಬ್ಬಾಳ್ಕರ್ ಅವರನ್ನು ಕೂಡಲೇ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಬೇಕು ಎಂದು ಗುಡುಗಿದ್ದಾರೆ.
 
ಹೆಬ್ಬಾಳ್ಕರ್ ಹೇಳಿಕೆಯನ್ನು ಈಗಾಗಲೇ ನಿಮ್ಮ ಸಂಪುಟದ ಇಂಧನ ಖಾತೆ ಸಚಿವರಾದ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಹೆಬ್ಬಾಳ್ಕರ್ ಹೇಳಿಕೆಯ ಬಗ್ಗೆ ನಿಮ್ಮ ನಿಲುವು ಏನು ಎಂದು ಪ್ರಶ್ನಿಸಿದ್ದಾರೆ.
 
ಕರ್ನಾಟಕದಲ್ಲಿ ನಾಡಗೀತೆಯಿದೆ, ತನ್ನದೇ ಆದ ಧ್ವಜವಿದೆ. ಕೇವಲ ವೋಟ್ ಬ್ಯಾಂಕ್‌ಗಾಗಿ ರಾಜ್ಯ ಸರಕಾರ ಭಾಷೆ ಮತ್ತು ಧ್ವಜದ ಗೊಂದಲ ಸೃಷ್ಟಿಸಲಾಗುತ್ತಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ