ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳುತ್ತದೆ : ಬಿಎಸ್‍ವೈ
ಶನಿವಾರ, 23 ಜುಲೈ 2022 (17:15 IST)
ಬೆಂಗಳೂರು : ನಿನ್ನೆ ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲ ಆಗಿದೆ. ನಾನು ವಿಧಾನಸಭೆ ಚುನಾವಣೆಗೆ ನಿಲ್ಲಲ್ಲ.
ಆದರೆ ವಿಜಯೇಂದ್ರನ ವಿಚಾರದಲ್ಲಿ ಹೈಕಮಾಂಡ್ ತಿರ್ಮಾನವೇ ಅಂತಿಮ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಶಿಕಾರಿಪುರದ ಜನ ಚುನಾವಣೆ ನಿಲ್ಲಲು ಒತ್ತಾಯ ಮಾಡಿದರು. ಆದರೆ ನಿಲ್ಲೋದಿಲ್ಲ, ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಹೇಳಿದೆ.
ವಿಜಯೇಂದ್ರ ಎಲ್ಲೇ ನಿಂತರೂ ಗೆಲ್ಲುವ ಒಂದು ಸಾಮರ್ಥ್ಯವನ್ನು ಬೆಳೆಸಿಕೊಂಡಿದ್ದಾರೆ. ಹಳೆ ಮೈಸೂರು, ಶಿಕಾರಿಪುರ ಎಲ್ಲೇ ನಿಂತರೂ ಅವರು ಗೆಲ್ಲುತ್ತಾರೆ. ಆದರೆ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿದ್ದೇವೆ.
ಕುಟುಂಬ ರಾಜಕೀಯದ ಆಗೋದಿಲ್ಲವಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ಮೋದಿ ಹೇಳಿದ್ದಾರೆ. ಹಾಗಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಬದಲಿಗೆ ನನ್ನ ಮಗ ಸ್ಪರ್ಧಿಸುತ್ತಾನೆ. ಈ ಕಾರಣಕ್ಕೆ ನಾನು ಚುನಾವಣೆಯಿಂದ ಹಿಂದೆ ಸರಿದಿದ್ದೇನೆ. ನನಗೆ ಪಕ್ಷದಲ್ಲಿ ಸಾಕಷ್ಟು ಅವಕಾಶ ಸಿಕ್ಕಿದೆ. ರಾಷ್ಟ್ರಮಟ್ಟದಲ್ಲಿ ಬೆಳೆಸಿದ್ದಾರೆ ಎಂದು ತಿಳಿಸಿದರು.