ಕೊನೆಗೂ ಶಬರಿಮಲೆ ದೇವಾಲಯ ಪ್ರವೇಶಿಸಿಯೇ ಬಿಟ್ರು ಇಬ್ಬರು ಮಹಿಳೆಯರು
ಬುಧವಾರ, 2 ಜನವರಿ 2019 (11:34 IST)
ತಿರುವನಂತಪುರಂ : ವಿರೋಧದ ನಡುವೆಯೂ ಕೊನೆಗೂ 40 ವರ್ಷದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿದ್ದಾರೆ.
ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಪೊಲೀಸರ ರಕ್ಷಣೆಯಲ್ಲಿ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಅಯ್ಯಪ್ಪನ ದರ್ಶನ ಪಡೆದಿದ್ದಾರೆ.
ಸುಪ್ರೀಂ ಕೋರ್ಟ್ ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ ನೀಡಿ ತೀರ್ಪು ಪ್ರಕಟಿಸಿತ್ತು. ಆದರೆ ಈ ತೀರ್ಪನ್ನು ಮಹಿಳಾ ಪರ ಸಂಘಟನೆಗಳು ಬೆಂಬಲಿಸಿದರೆ, ಕೆಲವು ಹಿಂದೂ ಸಂಘಟನೆಗಳು ತೀರ್ಪನ್ನು ವಿರೋಧಿಸಿ ಕೇರಳ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಿದ್ದರು.
ಈ ಹಿನ್ನಲೆಯಲ್ಲಿ ಡಿಸೆಂಬರ್ ನಲ್ಲಿ ಇಬ್ಬರು ಮಹಿಳೆಯರು ಶಬರಿಮಲೆ ಪ್ರವೇಶಿಸಿಲು ಪ್ರಯತ್ನ ನಡೆಸಿ ಸೋತು ಹಿಂದಕ್ಕೆ ಸರಿದಿದ್ದರು. ಆದರೆ ಇದೀಗ 40 ವರ್ಷದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿ ಇತಿಹಾಸ ನಿರ್ಮಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.