ಮತಾಂತರಕ್ಕೆ ಯತ್ನಿಸಿದ 11 ಮಂದಿಯ ವಿರುದ್ಧ ಎಫ್ಐಆರ್!
ಮಂಡ್ಯದ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ್ ಎಂಬವರಿಗೆ ಮತಾಂತರಕ್ಕೆ ಯತ್ನಿಸಿದ್ದು, ಅತ್ತಾವರ ಮೂಲದ 11 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಳೆದ ಮೇ ತಿಂಗಳಿನಲ್ಲಿ ಶ್ರೀಧರ್ ಅವರನ್ನು ಬೆಂಗಳೂರಿಗೆ ಕರೆದೊಯ್ದ ಆರೋಪಿಗಳು, ಬನಶಂಕರಿಯ ಮಸೀದಿಯೊಂದರಲ್ಲಿ ಬಲವಂತವಾಗಿ ಬಂಧಿಸಿಟ್ಟಿದ್ದರೆಂದು ಆರೋಪ ಮಾಡಲಾಗಿದೆ.
ಅಲ್ಲದೇ ಮುಸ್ಲಿಂ ಧರ್ಮದ ಬಗ್ಗೆ ನಂಬಿಕೆ ಬರುವಂತೆ ಮಾಡಿ, ದನದ ಮಾಂಸ ತಿನ್ನುವಂತೆ ಒತ್ತಾಯಿಸಿ ಹಲ್ಲೆ ಮಾಡಿ ಮತಾಂತರದ ಬಗ್ಗೆ ಬಾಂಡ್ ಪೇಪರ್ ನಲ್ಲಿ ಸಹಿ ಹಾಕಿಸಿಕೊಂಡಿದ್ದಾರೆ ಎನ್ನಲಾಗಿದೆ.