ರಾಹುಲ್‌ ಕೆನ್ನೆಗೆ ಬಾರಿಸಬೇಕಿದ್ದ ಶಾಸಕ ಭರತ್ ಶೆಟ್ಟಿ ವಿರುದ್ಧ ಎಫ್‌ಐಆರ್‌

Sampriya

ಬುಧವಾರ, 10 ಜುಲೈ 2024 (15:40 IST)
ಮಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪದಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕಾವೂರಿನಲ್ಲಿ ಸೋಮವಾರ ನಡೆದ ಪ್ರತಿಭಟನೆಯಲ್ಲಿ ಭರತ್ ಶೆಟ್ಟಿ ಅವರು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸಂಸತ್‌ನ ಒಳಗೆ ಎರಡು ಕೆನ್ನೆಗೆ ಬಾರಿಸಬೇಕು. ಆಗ ಎಲ್ಲವೂ ಸರಿಹೋಗುತ್ತದೆ ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಕೈ ನಾಯಕರು ಖಂಡಿಸಿ ಆಕ್ರೋಶ ಹೊರಹಾಕಿದ್ದರು.

ಇದೀಗ ಪಾಲಿಕೆ ಸದಸ್ಯ ಅನಿಲ್ ಕುಮಾರ್‌ ನೀಡಿದ ದೂರಿನ ಆಧಾರದಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 353ರ ಅಡಿ ಡಾ.ವೈ ಭರತ್‌ ಶೆಟ್ಟಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್‌ ಅನುಪಮ್ ಅಗರ್ವಾಲ್‌ ತಿಳಿಸಿದ್ದಾರೆ.

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನಲ್ಲಿ ಹಿಂದೂಗಳ ಕುರಿತುಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾದ ದಕ್ಷಿಣ ಕನ್ನಡ ಜಿಲ್ಲಾ ಘಟಕವು ಕಾವೂರಿನಲ್ಲಿ ಸೋಮವಾರ ಪ್ರತಿಭಟನೆ ಏರ್ಪಡಿಸಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ