ಮೌಂಟ್ ಕಾರ್ಮೆಲ್ ಕಾಲೇಜು ವಿರುದ್ಧ FIR..!
ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಪೊಲೀಸರು ಎಫ್ಐಆರ್ ಸಹ ಮಾಡಿದ್ದಾರೆ. ಅನುಮತಿ ಇಲ್ಲದೆ ಸಾವಿರಾರು ಮಂದಿಯನ್ನು ಸೇರಿಸಿ ಕಾಲೇಜು ಈವೆಂಟ್ ಆಯೋಜಿಸಿದ್ದ ಆರೋಪವನ್ನು ಆಡಳಿತ ಮಂಡಳಿ ವಿರುದ್ಧ ಹೊರಿಸಲಾಗಿದೆ. ಈವೆಂಟ್ನಲ್ಲಿ ಸುಮಾರು 10 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈವೆಂಟ್ಗೆ ಸೇರಿದ್ದ ಕೆಲವರು ಕಾಲೇಜು ವಿದ್ಯಾರ್ಥಿಗಳನ್ನು ಅಶ್ಲೀಲ ಶಬ್ದಗಳಿಂದ ನಿಂದಿಸಿ ಗಲಾಟೆ ಮಾಡಲು ಯತ್ನಿಸಿದ್ದರು. ಮೌಂಟ್ ಕಾರ್ಮಲ್ ಕಾಲೇಜಿನಿಂದ ನಡೆದಿದ್ದ ಈವೆಂಟ್ಗಾಗಿ ಪ್ರತಿ ವಿದ್ಯಾರ್ಥಿಗೆ 20 ಪಾಸ್ಗಳನ್ನು ನೀಡಲಾಗಿತ್ತು. ಈ ಪಾಸ್ಗಳನ್ನು ಕೆಲ ವಿದ್ಯಾರ್ಥಿಗಳು ಮಾರಿಕೊಂಡಿದ್ದರು. ಮೌಂಟ್ ಕಾರ್ಮೆಲ್ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಇತರ ಕಾಲೇಜುಗಳ ವಿದ್ಯಾರ್ಥಿಗಳೂ ಈವೆಂಟ್ಗೆ ಬಂದಿದ್ದರು. ಪೂರ್ವಾನುಮತಿ ಪಡೆಯದೇ ಈವೆಂಟ್ ಆಯೋಜಿಸಿದ್ದರಿಂದ ಏಕಾಏಕಿ ಜನಸಂದಣಿ ಮತ್ತು ವಾಹನ ದಟ್ಟಣೆ ಹೆಚ್ಚಾಗಿ ಟ್ರಾಫಿಕ್ ಜಾಮ್ ಸಹ ಉಂಟಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಠಾಣೆ ಸಬ್ಇನ್ಸ್ಪೆಕ್ಟರ್ ಸಚಿನ್ ನೀಡಿದ್ದ ದೂರಿನ ಅನ್ವಯ ಎಫ್ಐಆರ್ ದಾಖಲು ಮಾಡಲಾಗಿದೆ.