ಜಾರ್ಜ್, ಮೊಹಾಂತಿ, ಪ್ರಸಾದ್ ವಿರುದ್ಧ ಮಡಿಕೇರಿ ಠಾಣೆಯಲ್ಲಿ ಎಫ್ಐಆರ್ ದಾಖಲು

ಮಂಗಳವಾರ, 19 ಜುಲೈ 2016 (18:01 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಆದೇಶದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಐಎಎಸ್ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಹಾಗೂ ಎಂ.ಎಂ.ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
 
ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ಆದೇಶದಂತೆ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಐಎಎಸ್ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಹಾಗೂ ಎಂ.ಎಂ.ಪ್ರಸಾದ್ ವಿರುದ್ಧ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
 
ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜ್ ಹಾಗೂ ಅಧಿಕಾರಿಗಳಾದ ಪ್ರೊನಬ್ ಮೊಹಾಂತಿ ಮತ್ತು ಎಂ.ಎಂ.ಪ್ರಸಾದ್ ವಿರುದ್ಧ ಎಫ್‌ಐಆರ್ ದಾಖಲಿಸಿ ಎಂದು ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅನ್ನಪೂರ್ಣೆಶ್ವರಿ ಮಡಿಕೇರಿ ಟೌನ್ ಪೊಲೀಸರಿಗೆ ಸೂಚನೆ ನೀಡಿದ್ದರು.
 
ಎಂ.ಕೆ.ಗಣಪತಿ ಅವರ ಪುತ್ರ ನೇಹಾಲ್ ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ