ಹಾಸನ ಎಸಿ ಇ.ವಿಜಯಾ ವಿರುದ್ಧ ಎಫ್‌ಐಆರ್ ದಾಖಲು

ಶುಕ್ರವಾರ, 22 ಜುಲೈ 2016 (19:05 IST)
ಆತ್ಮಹತ್ಯೆಗೆ ಯತ್ನಿಸಿದ್ದ ಹಾಸನ ಉಪ ವಿಭಾಗಾಧಿಕಾರಿ ಇ.ವಿಜಯಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
 
ಉಪ ವಿಭಾಗಾಧಿಕಾರಿ ಇ.ವಿಜಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ಸುಜಿತ್ ಅವರು ಐಪಿಸಿ ಸೆಕ್ಸೆನ್ 200 ರ ಅಡಿಯಲ್ಲಿ ಹಾಸನದ 4ನೇ ಜೆಎಂಎಫ್‌ಸಿ ಕೋರ್ಟ್‌‌ನಲ್ಲಿ ದೂರು ದಾಖಲಿಸಿದ್ದರು. ಕೋರ್ಟ್‌ ಆದೇಶದಂತೆ ಇಂದು ಹಾಸನ ಉಪ ವಿಭಾಗಾಧಿಕಾರಿ ಇ.ವಿಜಯಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ. 
 
ಜುಲೈ 21 ರಂದು ಹಾಸನ ಉಪ ವಿಭಾಗಾಧಿಕಾರಿಯಾಗಿರುವ ಇ.ವಿಜಯಾ ಅವರು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ