ವಿಪಕ್ಷ ನಾಯಕ ಈಶ್ವರಪ್ಪ ವಿರುದ್ಧ ಎಫ್‌ಐಆರ್

ಗುರುವಾರ, 6 ಏಪ್ರಿಲ್ 2017 (18:46 IST)
ಗುಂಡ್ಲುಪೇಟೆಯಲ್ಲಿ ಭಾರಿ ಪ್ರಮಾಣದಲ್ಲಿ ಹಣ ಹಂಚಲಾಗಿದೆ ಎಂದು ಹೇಳಿರುವುದಕ್ಕೆ ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಬಿಜೆಪಿ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
 
ಗುಂಡ್ಲುಪೇಟೆ ಚುನಾವಣೆ ಮೇಲುಸ್ತುವಾರಿ ಹೊತ್ತಿರುವ ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಮತದಾರರಿಗೆ ಹಣ ಹಂಚುತ್ತಿದ್ದಾರೆ. ಚುನಾವಣೆಯಲ್ಲಿ ನನ್ನ ವಿರುದ್ಧ ಎಫ್‌ಐಆರ್ ದಾಖಲಾಗದಿದ್ದಲ್ಲಿ ಕಾಂಗ್ರೆಸ್ ನಾಯಕರಿಗೆ ಸಮಾಧಾನವಾಗುವುದಿಲ್ಲ ಎಂದು ತಿಳಿಸಿದ್ದಾರೆ. 
 
ಏ.9 ರಂದು ನಡೆಯಲಿರುವ ಗುಂಡ್ಲುಪೇಟೆ ಉಪಚುನಾವಣೆಯ ಕಾವು ಆಕಾಶಕ್ಕೇರಿದ್ದು, ಕರುಡು ಕಾಂಚಾಣ ಕುಣಿಯುತ್ತಿದೆ. ಹಣದಿಂದಲೇ ಚುನಾವಣೆ ಗೆಲ್ಲಬಹುದು ಎಂದು ಸಚಿವ ಡಿ.ಕೆ.ಶಿವಕುಮಾರ್ ಭಾವಿಸಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.
 
ಕಾಂಗ್ರೆಸ್ ನಾಯಕರು ಹಣಬಲ, ತೋಳ್ಬಲ, ಜಾತಿಬಲ ಮತ್ತು ಅಧಿಕಾರದ ಬಲದಿಂದ ಚುನಾವಣೆಯಲ್ಲಿ ಅನೈತಿಕ ಕಾರ್ಯಗಳಿಗೆ ಮುಂದಾಗಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ