ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪುತ್ರನ ವಿರುದ್ಧ ಎಫ್.ಐ.ಆರ್ ದಾಖಲು

ಬುಧವಾರ, 4 ಡಿಸೆಂಬರ್ 2019 (10:47 IST)
ಹಾಸನ : ಹಲ್ಲೆ ಮಾಡಿದ ಆರೋಪದ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪುತ್ರ ಸೂರಜ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.



ನಿನ್ನೆ ಪ್ರಚಾರ ಮುಗಿಸಿ ವಾಪಾಸಾಗುವ ವೇಳೆ ಚೆನ್ನರಾಯಪಟ್ಟಣ ತಾಲೂಕಿನ ನಿಂಬೆಹಳ್ಳಿಯಲ್ಲಿ ಹೆಚ್.ಡಿ.ರೇವಣ್ಣ ಪುತ್ರ ಸೂರಜ್ ಸೇರಿದಂತೆ ಐವರು ಬೆಂಬಲಿಗರು ಬಿಜೆಪಿ  ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.


ಈ ಹಿನ್ನಲೆಯಲ್ಲಿ ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಗ್ರಾಮಾಂತರ ಠಾಣೆಯಲ್ಲಿ ಸಚಿವ ಹೆಚ್.ಡಿ.ರೇವಣ್ಣ ಪುತ್ರ ಸೂರಜ್ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ