ಮಾರ್ಚ್ 27ರಂದು ಗುಂಡ್ಲುಪೇಟೆ ಚುನಾವಣಾ ಪ್ರಚಾರದ ವೇಳೆ ಹಣ ಹಂಚಿದ ಆರೋಪದಡಿ ಆಹಾರ ಸಚಿವ ಯು.ಟಿ. ಖಾದರ್ ಮತ್ತು ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸಚಿವರು ಹಣ ಹಂಚುತ್ತಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿದ್ದವು. ಮಾಧ್ಯಮಗಳ ವರದಿ ಆಧರಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದೀಗ, ನ್ಯಾಯಾಲಯದ ಅನುಮತಿ ಪಡೆದಿರುವ ಚುನಾವಣಾ ಆಯೋಗ ಎಫೈಆರ್ ದಾಖಲಿಸಿದೆ ಎಂದು ತಿಳಿದುಬಂದಿದೆ.