ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿರುವ ಗಣಪತಿ ಪತ್ನಿ ಪಾವನಾ, ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.
ರಂಗಸಮುದ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗಣಪತಿ ಪತ್ನಿ ಪಾವನಾ, ಮಡಿಕೇರಿ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಅನ್ನಪೂರ್ಣೇಶ್ವರಿ ಅವರು ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಪ್ರೊನಬ್ ಮೊಹಂತಿ ಮತ್ತು ಎಂ.ಎಂ.ಪ್ರಸಾದ್ ಅವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಮಡಿಕೇರಿ ಟೌನ್ ಪೊಲೀಸರಿಗೆ ಸೂಚನೆ ನೀಡಿರುವುದು ಸಂತಸ ತಂದಿದೆ. ನಮಗೆ ನ್ಯಾಯ ಸಿಗುವ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.