ಬೆಂಗಳೂರು: ನಗರದ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಾಲ್ಕನೇ ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿದೆ.
ಮೃತರನ್ನು ಮದನ್ ಕುಮಾರ್(36), ಅವರ ಪತ್ನಿ ಸಂಗೀತಾ(33) ಮದನ್ ಕುಮಾರ್ ಮಕ್ಕಳಾದ ಮಿಥೇಶ್(8), ವಿಹಾನ್(5) ಮತ್ತು ಎರಡನೇ ಮಹಡಿಯಲ್ಲಿದ್ದ ಸುರೇಶ್ ಕೂಡಾ ಸಾವನ್ನಪ್ಪಿದ್ದಾರೆ.
ಮುಂಜಾನೆ 3.301ರ ಸುಮಾರಿಗೆ ಶಾರ್ಟ್ ಸರ್ಕಿಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ನಾಲ್ಕು ಅಂತಸ್ತಿನ ಕಟ್ಟಡಕ್ಕೆ ವ್ಯಾಪಿಸಿ ದುರಂತ ಸಂಭವಿಸಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಈ ಘಟನೆ ಬೆಳ್ಳಂಬೆಳಗ್ಗೆ ಸಿಲಿಕಾನ್ ಸಿಟಿಗೆ ಬಿಗ್ ಶಾಕ್ ನೀಡಿದೆ.