ಗಣೇಶ್ ಚಿತ್ರಮಂದಿರದಲ್ಲಿ ಬೆಂಕಿ ಅವಘಡ: ಸುಟ್ಟು ಕರಕಲಾದ ಪೀಠೋಪಕರಣ

Sampriya

ಬುಧವಾರ, 12 ಮಾರ್ಚ್ 2025 (19:00 IST)
Photo Courtesy X
ದಾವಣಗೆರೆ: ಇಲ್ಲಿನ ಗಣೇಶ್‌ ಚಿತ್ರಮಂದಿರದಲ್ಲಿ ಅಗ್ನಿ ಅವಘಡ ಸಂಭವಿಸಿ, ಪೀಠೋಪಕರಣಗಳು ಸುಟ್ಟು ಭಸ್ಮವಾದ ಘಟನೆ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ನಡೆದಿದೆ.

ಕಳೆದ ನಾಲ್ಕೈದು ವರ್ಷಗಳಿಂದ ಸ್ಥಗಿತಗೊಂಡಿದ್ದ ಗಣೇಶ ಚಿತ್ರಮಂದಿರದಲ್ಲಿ ಈ ಅವಘಡ ಸಂಭವಿಸಿದೆ.

ಬೆಂಕಿ ಅವಘಡಕ್ಕೆ ಆಸನಗಳು ಸೇರಿದಂತೆ ಹಲವು ಪರಿಕರಗಳು ಸುಟ್ಟು ಭಸ್ಮವಾಗಿದೆ. ಇದರಿಂದ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿದೆ. ಇದರಿಂದ ಆತಂಕಕ್ಕೊಳಗಾದ ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಿದ್ದಾರೆ.


ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರಮಂದಿರ ಸ್ಥಗಿತಗೊಂಡಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಅಗ್ನಿ ಅವಘಡಕ್ಕೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ