ಬೆಂಗಳೂರು : ಬೆಂಗಳೂರಿನ ಬಾಗಲೂರು ಬಳಿ ಆರೋಪಿಯೊಬ್ಬನ ಮೇಲೆ ಅಮೃತಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಫೈರಿಂಗ್ ಮಾಡಿದ್ದಾರೆ.
ಆರೋಪಿ ಮುನಿಕೃಷ್ಣ ಅಲಿಯಾಸ್ ಕಪ್ಪೆ ಮೇಲೆ ಫೈರಿಂಗ್ ಮಾಡಲಾಗಿದೆ, ಮದ್ಯ ನೀಡಿಲ್ಲವೆಂದು ಗೆಳೆಯನಿಗೆ ಚಾಕು ಇರಿದಿದ್ದ ಈ ಆರೋಪಿ ಕೊಲೆ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ.
ಬಾಗಲೂರಿನಲ್ಲಿಂದು ಆರೋಪಿ ಮುನಿಕೃಷ್ಣ ಕಾಣಿಸಿಕೊಂಡಿದ್ದ ಹಿನ್ನಲೆಯಲ್ಲಿ ಆರೋಪಿಯನ್ನು ಬಂಧಿಸಲು ತೆರಳಿದ್ದ ಇನ್ಸ್ ಪೆಕ್ಟರ್ ಶರಣಾಗುವಂತೆ ಸೂಚಿಸಿದರೂ ಕೇಳದ ಹಿನ್ನಲೆಯಲ್ಲಿ ಮುನಿಕೃಷ್ಣ ಕಾಲಿಗೆ ಗುಂಡು ಹಾರಿಸಿದ್ದಾರೆ. ಈ ವೇಳೆ ಪೊಲೀಸ್ ಕಾನ್ಸ್ ಟೇಬಲ್ ಗೆ ಗಾಯವಾಗಿದ್ದು, ಗಾಯಾಳುಗಳಿಗೆ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.