ಪರೀಕ್ಷೆಗೆ ನೋಂದಣಿ ಮಾಡಿಸಿದ್ದ ಒಟ್ಟು 2,01,834 ಅಭ್ಯರ್ಥಿಗಳಲ್ಲಿ, 1,62,439 (80.48%) ಅಭ್ಯರ್ಥಿಗಳು ಜೀವಶಾಸ್ತ್ರ ವಿಷಯಕ್ಕೆ ಮತ್ತು 1,89,522 (92.90%) ಅಭ್ಯರ್ಥಿಗಳು ಗಣಿತ ವಿಷಯಕ್ಕೆ ಹಾಜರಾಗಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹೊರಡಿಸಿರುವ ಎಸ್ಓಪಿ ಅನುಸಾರ ಕೋವಿಡ್-19 ಪಾಸಿಟೀವ್ ಅಭ್ಯರ್ಥಿಗಳಿಗೆ ಸಿಇಟಿ ಪರೀಕ್ಷೆಯನ್ನು ಬರೆಯಲು ಅವಕಾಶ ಕಲ್ಪಿಸಿದ್ದು, ರಾಜ್ಯದ ವಿವಿಧ ಕೋವಿಡ್ ಆರೈಕೆ ಕೇಂದ್ರಗಳಲ್ಲಿ ಅಗತ್ಯ ವ್ಯವಸ್ಥೆಯನ್ನು ಮಾಡಿ ಪರೀಕ್ಷೆಯನ್ನು ನಡೆಸಲಾಗಿದೆ. ಜೀವಶಾಸ್ತ್ರ ವಿಷಯಕ್ಕೆ 09 ಮತ್ತು ಗಣಿತ ವಿಷಯಕ್ಕೆ 12 ಕೋವಿಡ್ ಪಾಸಿಟಿವ್ ಅಭ್ಯರ್ಥಿಗಳು ಹಾಜರಾಗಿದ್ದರು ಎಂದು ಅವರು ಸಚಿವರು ತಿಳಿಸಿದ್ದಾರೆ.