ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ
ದ್ವಿತೀಯ ಪಿಯು ಫಲಿತಾಂಶದಲ್ಲಿ ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯು ಶೇಕಡ 95.34% ರಷ್ಟು ಫಲಿತಾಂಶ ಪಡೆದುಕೊಂಡು ಪ್ರಥಮ ಸ್ಥಾನದಲ್ಲಿದ್ದರೆ, ಯಾದಗಿರಿ ಜಿಲ್ಲೆಯು ಶೇಕಡ 62.98%ರಷ್ಟು ಫಲಿತಾಂಶ ಪಡೆದುಕೊಂಡು ಕೊನೆಯ ಸ್ಥಾನದಲ್ಲಿದೆ. ಹಾಗೆಯೇ ಉಡುಪಿ ಜಿಲ್ಲೆಗೆ 2 ನೇ ಸ್ಥಾನ, ಕೊಡಗಿಗೆ 3ನೇ ಸ್ಥಾನ, ಉತ್ತರ ಕನ್ನಡ 4ನೇ ಸ್ಥಾನ, ವಿಜಯಪುರ 5 ನೇ ಸ್ಥಾನದಲ್ಲಿದ್ದು, ಚಿಕ್ಕಮಗಳೂರು ಜಿಲ್ಲೆ 6ನೇ ಸ್ಥಾನ ಪಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ 9ನೇ ಸ್ಥಾನ, ಬೆಂಗಳೂರು ದಕ್ಷಿಣ ಜಿಲ್ಲೆ 10ನೇ ಸ್ಥಾನದಲ್ಲಿದ್ದರೆ, ಬೆಂಗಳೂರು ಉತ್ತರ ಜಿಲ್ಲೆ 11ನೇ ಸ್ಥಾನದಲ್ಲಿದೆ.