ಮಲ್ಪೆ ಬಂದರಿನಿಂದ ಮೀನುಗಾರರು ನಾಪತ್ತೆ ಪ್ರಕರಣ; ಭಾನುವಾರ ಮೂರೂ ಜಿಲ್ಲೆಯ ಬಂದರುಗಳ ಬಂದ್ ಗೆ ಕರೆ

ಶನಿವಾರ, 5 ಜನವರಿ 2019 (07:51 IST)
ಉಡುಪಿ : ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ 7 ಮಂದಿ ಮೀನುಗಾರರು ನಾಪತ್ತೆಯಾಗಿದ್ದು, ಈ ಬಗ್ಗೆ ಸರ್ಕಾರ ಯಾವುದೇ ಕ್ರಮ ತೆಗೆದುಕೊಳ್ಳದ ಹಿನ್ನಲೆಯಲ್ಲಿ ಭಾನುವಾರ ಮೂರೂ ಜಿಲ್ಲೆಯ ಬಂದರುಗಳ ಬಂದ್ ಗೆ ಕರೆ ನೀಡಿದೆ.


ಡಿಸೆಂಬರ್ 13ರಿಂದ ಈವರೆಗೆ ನಾಪತ್ತೆಯಾದ ಮೀನುಗಾರರು ಮತ್ತು ಬೋಟನ್ನು ಹುಡುಕಾಟ ನಡೆಸಿದರೂ ಪತ್ತೆಯಾಗಿಲ್ಲ. ಗೋವಾ ಮತ್ತು ಮಹಾರಾಷ್ಟ್ರ  ಸಮುದ್ರದ ಗಡಿಯಲ್ಲಿ ಮೀನುಗಾರರು ಕಣ್ಮರೆಯಾಗಿರುವ ವಿಚಾರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಗಮನಕ್ಕೆ ಬಂದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ.


ಘಟನೆ ನಡೆದು ತಿಂಗಳಾದರೂ ಸಿಎಂ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಹಾಗೂ ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಈ ಕುರಿತು ಒಂದೇ ಒಂದು ಹೇಳಿಕೆ ನೀಡದಿರುವುದು ಕರಾವಳಿಯ ಪ್ರಬಲ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಎರಡೂ ಸರ್ಕಾರಗಳ ವಿರುದ್ಧ ಜನವರಿ 6 ರಂದು ಕಡಲ ಮಕ್ಕಳು ಬೀದಿಗಿಳಿದು ಹೋರಾಟ ಮಾಡಲಿದ್ದಾರೆ  ಎಂದು ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ