ಉತ್ತರಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಜಾಬ್ ರಾಜ್ಯಗಳಲ್ಲಿ ನಡೆದ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಈ ಚುನಾವಣೆಗಳ ಫಲಿತಾಂಶಗಳು ಅತ್ಯಂತ ಮಹತ್ವದ್ದಾಗಿದೆ.
ಗೋವಾ ರಾಜ್ಯವು ಫೆ.14 ರಂದು ಒಂದೇ ಹಂತದಲ್ಲಿ ಮತ ಚಲಾಯಿಸಿತು. ಗೋವಾದಲ್ಲಿ 40 ಸ್ಥಾನಗಳಿದ್ದು, 332 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್-ಜಿಎಫ್‌ಪಿ ತಲಾ 40 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ, ಆಮ್ ಆದ್ಮಿ ಪಕ್ಷದಿಂದ 39 ಅಭ್ಯರ್ಥಿಗಳು ಕಣದಲ್ಲಿದ್ದಾರೆ.