ಸಚಿವ ಸಂಪುಟ ಸಭೆಯಲ್ಲಿಯೇ ಐದು ಗ್ಯಾರಂಟಿ ಜಾರಿ : ಸಿದ್ದರಾಮಯ್ಯ

ಭಾನುವಾರ, 14 ಮೇ 2023 (13:57 IST)
ಯಾವುದೇ ಚುನಾವಣೆಯಲ್ಲಿ ಕೇವಲ ರಾಜಕೀಯ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಮಾತ್ರವಲ್ಲ ಲಕ್ಷಾಂತರ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲದ ಅಭಿಮಾನಿಗಳು ರಾತ್ರಿ ಹಗಲು ಶ್ರಮಪಟ್ಟಿರುತ್ತಾರೆ. ಅವರೆಲ್ಲರಿಗೂ ತುಂಬು ಹೃದಯದ ಕೃತಜ್ಞತೆಗಳು.
 
ಈ ಚುನಾವಣೆಯಲ್ಲಿ ನಮ್ಮ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕ ಗಾಂಧಿ ಅವರು ನಡೆಸಿರುವ ಪ್ರಯತ್ನವನ್ನು ಮರೆಯಲಾಗದು. ಬಹಳ ಮುಖ್ಯವಾಗಿ ಕರ್ನಾಟಕದ ಚುನಾವಣಾ ಪ್ರಚಾರ ಪ್ರಾರಂಭವಾಗಿದ್ದೇ ರಾಹುಲ್ ಗಾಂಧಿಯವರ ಭಾರತ ಜೋಡೋ ಯಾತ್ರೆಯಿಂದ.

ಈ ಯಾತ್ರೆ ಇಡೀ ಕರ್ನಾಟಕದಲ್ಲಿ ಸಂಚಲನ ಉಂಟುಮಾಡಿತ್ತು. ನಮ್ಮ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿತ್ತು. ಈ ಫಲಿತಾಂಶದ ಶ್ರೇಯಸ್ಸು ಅವರಿಗೂ ಸಲ್ಲುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ