ಉಪಚುನಾವಣೆಯಲ್ಲಿ ಗೆದ್ದ ನೂತನ ಶಾಸಕರ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್

ಮಂಗಳವಾರ, 17 ಡಿಸೆಂಬರ್ 2019 (10:52 IST)
ಬೆಂಗಳೂರು : ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ 15 ನೂತನ ಶಾಸಕರು ಡಿಸೆಂಬರ್ 22 ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.12 ಬಿಜೆಪಿ ಶಾಸಕರು, 2 ಕಾಂಗ್ರೆಸ್ ಶಾಸಕರು ಹಾಗೂ ಓರ್ವ ಪಕ್ಷೇತರ ಶಾಸಕ ವಿಧಾನಸೌಧದಲ್ಲಿ ಡಿಸೆಂಬರ್ 22 ರಂದು ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ಅದಕ್ಕಾಗಿ ಈಗಾಗಲೇ ಎಲ್ಲಾ ರೀತಿಯ ತಯಾರಿ ನಡೆಸಲಾಗಿದೆ.


ಈಗಾಗಲೇ ಬಿಜೆಪಿಯಲ್ಲಿ ಸಚಿವ ಸ್ಥಾನಕ್ಕಾಗಿ ಶಾಸಕರು ಲಾಬಿ ನಡೆಸುತ್ತಿದ್ದು, ಸಿಎಂ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನಕ್ಕಾಗಿ ಮನವಿ ಮಾಡುತ್ತಿದ್ದಾರೆ. ಇದೀಗ ಡಿ.22ರಂದು ಯಾರಿಗೆ ಸಚಿವ ಸ್ಥಾನ ಒಲಿದಿದೆ ಎಂಬ ವಿಚಾರ ತಿಳಿಯಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ