ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ಹಾಲಿನ ದರವೂ ಹೆಚ್ಚಳ: ಸುಳಿವು ನೀಡಿದ ಸಚಿವ ವೆಂಕಟೇಶ್
ಹಾಲಿನ ದರ ಏರಿಕೆ ಪ್ರಸ್ತಾಪ ಇರೋದು ಸತ್ಯ ಎಂದು ಸಚಿವರು ಒಪ್ಪಿಕೊಂಡಿದ್ದು, ಸಿಎಂ ಸಿದ್ದರಾಮಯ್ಯ ಹಸಿರು ನಿಶಾನೆ ನೀಡಿದರೆ ಶೀಘ್ರವೇ ಹಾಲಿನ ದರ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ಬಸ್ ದರ ಏರಿಕೆಯಿಂದ ಕಂಗೆಟ್ಟ ಜನರಿಗೆ ಇದರಿಂದ ಮತ್ತೊಂದು ಬರೆ ಬೀಳಲಿದೆ.