ಫುಡ್ ಪಾಯಿಸನ್ : ನರ್ಸಿಂಗ್ ಕಾಲೇಜಿನ 137 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು!

ಮಂಗಳವಾರ, 7 ಫೆಬ್ರವರಿ 2023 (10:03 IST)
ಮಂಗಳೂರು : ನರ್ಸಿಂಗ್ ಕಾಲೇಜಿನ ಹಾಸ್ಟೆಲ್ನ 89ಕ್ಕೂ ಹೆಚ್ಚು ವಿದ್ಯಾರ್ಥಿಗಳು ಫುಡ್ ಪಾಯಿಸನ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು ಹೊರವಲಯದ ಶಕ್ತಿ ನಗರದಲ್ಲಿರುವ ಪ್ರತಿಷ್ಠಿತ ಸಿಟಿ ಆಸ್ಪತ್ರೆಯ ನರ್ಸಿಂಗ್ ವಿದ್ಯಾರ್ಥಿಗಳು ಹಾಸ್ಟೆಲ್ನಲ್ಲಿ ಚಿಕನ್, ಗೀರೈಸ್ ತಿಂದು ಫುಡ್ ಪಾಯಿಸನ್ ಆಗಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ. ನಗರದ ಸಿಟಿ ಆಸ್ಪತ್ರೆ, ಎ.ಜೆ. ಆಸ್ಪತ್ರೆ, ಕೆಎಂಸಿ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳು ದಾಖಲಾಗಿದ್ದಾರೆ.

ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯದ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಗಳು ದಾಖಲಾಗಿರುವ ಆಸ್ಪತ್ರೆಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ