ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶ್ಯಾಂಭಟ್ ಹೆಸರು ಶಿಫಾರಸ್ಸು

ಸೋಮವಾರ, 23 ಮೇ 2016 (16:12 IST)
ನೂತನ ಕೆಪಿಎಸ್‌ಸಿ ಅಧ್ಯಕ್ಷರಾಗಿ ಬಿಡಿಎ ಆಯುಕ್ತ ಶ್ಯಾಂ ಭಟ್ ಅವರನ್ನು ನೇಮಕ ಮಾಡುವಂತೆ ರಾಜ್ಯ ಸರಕಾರ ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಶಿಫಾರಸ್ಸು ಮಾಡಿದೆ.
 
ಕೆಪಿಎಸ್‌ಸಿ ಸದಸ್ಯರಾಗಿ ನೇಮಕ ಮಾಡುವಂತೆ ಬಿಬಿಎಂಪಿ ಪಶ್ಚಿಮ ವಿಭಾಗದ ಜಂಟಿ ಆಯುಕ್ತ ಲಕ್ಷ್ಮೀನರಸಯ್ಯ ಮತ್ತು ಸಹಾಯಕ ವಾಣಿಜ್ಯ ತೆರಿಗೆ ಆಯುಕ್ತ ಸಯೀದ್ ಅಹ್ಮದ್ ಖಾನ್ ಅವರ ಹೆಸರನ್ನು ರಾಜ್ಯಸರಕಾರ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದೆ.
 
ರಾಜ್ಯ ಸರಕಾರ ಕಳುಹಿಸಿರುವ ಪ್ರಸ್ತಾವನೆಗೆ ರಾಜ್ಯಪಾಲರು ಅಂಕಿತ ಹಾಕಿದ ನಂತರವೇ ಕೆಪಿಎಸ್‍‌ಸಿ ಅಧ್ಯಕ್ಷ ಹಾಗೂ ಸದಸ್ಯರ ನೇಮಕ ಮಾಡಲಾಗುತ್ತದೆ ಎಂದು ರಾಜ್ಯ ಸರಕಾರ ತಿಳಿಸಿದೆ.
 
ಬಿಡಿಎ ಆಯುಕ್ತ ಶ್ಯಾಂ ಭಟ್ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಶನ್ ಭ್ರಷ್ಟಾಚಾರ ಸೇರಿದಂತೆ ಕರ್ತವ್ಯ ಲೋಪ ಆರೋಪವನ್ನು ಎದುರಿಸುತ್ತಿದ್ದಾರೆ. ಈ ವ್ಯಕ್ತಿ  ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಅರ್ಹರಲ್ಲ. ಇಂತಹ ಆರೋಪ ಹೊತ್ತಿರುವವರನ್ನು ಅಧ್ಯಕ್ಷರಾಗಿ ನೇಮಕ ಮಾಡುವುದರಿಂದ ಸರಕಾರ ತೀವ್ರ ಮುಜುಗರಕ್ಕೊಳಗಾಗುತ್ತದೆ ಎಂದು ಪ್ರಜ್ಞಾವಂತ ನಾಗರಿಕ ಕಳಕಳಿ ಸಂಸ್ಥೆಯ (ಎಸಿಐಸಿಎಂ) ಸಂಚಾಲಕ ಲಕ್ಷಣ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರತ್ರ ಬರೆದಿದ್ದರು.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ