ಕಾಂಗ್ರೆಸ್ ಅತೃಪ್ತ ಶಾಸಕರೊಂದಿಗೆ ಚರ್ಚೆ ನಡಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಶ್ರೀನಿವಾಸ ಪ್ರಸಾದ್, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಉಳಿಯಲು ನಾಯಕತ್ವ ಬದಲಾವಣೆ ಅವಶ್ಯಕವಾಗಿದೆ. ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವಕ್ಕೆ ಯಾವುದೇ ಕೊರತೆ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪರ್ಯಾಯವಾಗಿ ಹಲವು ನಾಯಕರಿದ್ದಾರೆ ಎಂದು ನಾಯಕತ್ವ ಬದಲಾವಣೆ ವಿಚಾರ ಪ್ರಸ್ತಾಪ ಮಾಡಿದ್ದಾರೆ.