ರೀಲ್ಸ್‌ಗಾಗಿ, 20 ಅಡಿ ಎತ್ತರದಿಂದ ತುಂಗಭದ್ರಾ ನದಿಗೆ ಜಿಗಿದ ವೈದ್ಯೆ, ಮುಂದೇ ಆಗಿದ್ದು ದೊಡ್ಡ ಅನಾಹುತ

Sampriya

ಬುಧವಾರ, 19 ಫೆಬ್ರವರಿ 2025 (17:35 IST)
Photo Courtesy X
ಕೊಪ್ಪಳ: ರೀಲ್ಸ್‌ಗಾಗಿ ಇಲ್ಲಿನ ತುಂಗಭದ್ರಾ ನದಿಗೆ 20 ಅಡಿ ಎತ್ತರದಿಂದ ಜಿಗಿದ ವೈದ್ಯೆಯೊಬ್ಬರು ಈಜಲು ಸಾಧ್ಯವಾಗದೆ ನೀರುಪಾಲಾದ ಘಟನೆ ನಡೆದಿದೆ.

ಸ್ನೇಹಿತರ ಜೊತೆ ಈಜಲು ಹೋಗಿದ್ದ ವೈದ್ಯೆಯೊಬ್ಬಳು 20 ಅಡಿ ಎತ್ತರದಿಂದ ತುಂಗಭದ್ರಾ ನದಿಗೆ ಜಿಗಿದಿದ್ದಾಳೆ.  ಆದರೆ ಈಜಲು ಸಾಧ್ಯವಾಗದೆ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾಗಿದ್ದಾರೆ.

ಹೈದರಾಬಾದ್ ಮೂಲದ 26 ವರ್ಷದ ಅನನ್ಯರಾವ್​ ಜಿಗಿದಿದ್ದಳು. ಆದರೆ ನೀರಿನ ಹರಿವು ಹೆಚ್ಚಾಗಿದ್ದರಿಂದ ಈಜಲು ಸಾಧ್ಯವಾಗದೇ ಮುಳುಗಿದ್ದಾಳೆ. ಹೈದರಬಾದ್​ ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅನನ್ಯರಾವ್​, ನಿನ್ನೆ ಮೂವರು ಸ್ನೇಹಿತರ ಜತೆ ಪ್ರವಾಸಕ್ಕೆ ಬಂದಿದ್ದು, ಇಂದು ಬೆಳಗ್ಗೆ ನದಿಗೆ ಈಜಲು ತೆರಳಿದ್ದರು.

ಇನ್ನು ರೀಲ್ಸ್‌ಗಾಗಿ ವಿಡಿಯೋ ಮಾಡಲು ಹೋದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.  ಹೌದು ದೂರದಲ್ಲಿ ನಿಂತಿದ್ದ ವ್ಯಕ್ತಿಯೋರ್ವ ಒಂದು, ಎರಡು, ಮೂರು ಜಂಪ್ ಎಂದು ಹೇಳಿದ ತಕ್ಷಣ ಅನನ್ಯರಾವ್ ನದಿಗೆ ಜಿಗಿದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಇನ್ನು ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿದ್ದು, ವೈದ್ಯೆಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ