ನೆಲ, ಜಲ, ಭಾಷೆಗೆ ಧಕ್ಕೆ ಬಂದಾಗ ಸರಕಾರಕ್ಕೆ ಬೆಂಬಲ: ಅನಂತ್ ಕುಮಾರ್

ಶನಿವಾರ, 27 ಆಗಸ್ಟ್ 2016 (18:22 IST)
ನೆಲ, ಜಲ, ಭಾಷೆಗೆ ಧಕ್ಕೆ ಉಂಟಾಗುವ ಸಂದರ್ಭ ಬಂದರೆ ಪಕ್ಷ ಬೇಧ ಮರೆತು ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ಸರಕಾರವನ್ನು ಬೆಂಬಲಿಸುತ್ತೇವೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಹೇಳಿದರು. 
 
ಕಾವೇರಿ ನದಿಯಿಂದ ನೀರು ಬಿಡುವಂತೆ ತಮಿಳುನಾಡು ಸರಕಾರದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಿತು.
 
ಸರ್ಪ ಪಕ್ಷಗಳ ಸಭೆ ಬಳಿಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಜಲಾನಯನ ಪ್ರದೇಶಗಳಲ್ಲಿ ನೀರಿಗೆ ತೀವ್ರ ಸಂಕಷ್ಟವುಂಟಾಗಿದೆ. ಇಂತಹ ಪರಿಸ್ಥಿತಿಯ ಕುರಿತು ನಾವು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡಿಕೊಡಬೇಕು. ಈ ಕೆಲಸವನ್ನು ರಾಜ್ಯ ಸರಕಾರ ಮಾಡಬೇಕು ಎಂದರು.
 
ಈಗಾಗಲೇ ಕಾವೇರಿ ಜಲಾನಯನ ಪ್ರದೇಶದಲ್ಲಿ ಬಿತ್ತನೆ ಕಾರ್ಯಗಳು ಮುಗಿಯಬೇಕಿತ್ತು. ಆದರೆ, ಮಳೆ ಕೊರತೆಯಿಂದ ಬಹುತೇಕ ಪ್ರದೇಶದ ಭೂಮಿಯಲ್ಲಿ ಬಿತ್ತನೆಯಾಗದೆ ಹಾಗೇ ಉಳಿದಿದೆ. ರಾಜ್ಯದಲ್ಲಿ ಇನ್ನೂ ಕೆಲ ಕಾಲ ಮಳೆಯಾಗದಿದ್ದರೆ ಪರಿಸ್ಥಿತಿ ತುಂಬಾ ಬಿಗಡಾಯಿಸುತ್ತದೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಎಚ್ಚರಿಸಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ