ಮಕ್ಕಳಿಗೆ ಎನ್ಇಪಿ ಆಧಾರಿತ ಬುನಾದಿ ಹಂತದ ಪಠ್ಯಕ್ರಮ ಬಿಡುಗಡೆ

ಭಾನುವಾರ, 26 ಮಾರ್ಚ್ 2023 (20:55 IST)
ದೇಶದಲ್ಲೇ ಮೊದಲಿಗೆ ರಾಜ್ಯದಲ್ಲಿ 3 ರಿಂದ 8 ವರ್ಷ ವಯೋಮಿತಿಯ ಮಕ್ಕಳಿಗೆ ಎನ್ಇಪಿ ಆಧಾರಿತ ಬುನಾದಿ ಹಂತದ ಪಠ್ಯಕ್ರಮ ಬಿಡುಗಡೆ ಮಾಡಲಾಗಿದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ
ಬಿ.ಸಿ.ನಾಗೇಶ್ ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರೂಪಿಸಿರುವ ಬುನಾದಿ ಹಂತದ ರಾಜ್ಯ ಪಠ್ಯಕ್ರಮದ ಚೌಕಟ್ಟನ್ನು ಬಿಡುಗಡೆ ಮಾಡಿದ್ದಾರೆ. ಎನ್ಇಪಿ 2020 ಹಾಗೂ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು 2022ರ ಆಧಾರದ ಮೇಲೆ ಮೂರರಿಂದ ಎಂಟನೇ ವರ್ಷದ ವಯೋಮಿತಿಯ ಮಕ್ಕಳ ಶಿಕ್ಷಣಕ್ಕಾಗಿ ಬುನಾದಿ ಹಂತದ ರಾಜ್ಯ ಪಠ್ಯಕ್ರಮ ಚೌಕಟ್ಟು ರಚನೆ ಮಾಡಿದ ಮೊದಲ ರಾಜ್ಯ ಕರ್ನಾಟಕ ಆಗಿದೆ. ಮೂರರಿಂದ ಎಂಟು ವರ್ಷದ ಮಕ್ಕಳ ಶಿಕ್ಷಣಕ್ಕಾಗಿ ರಚಿಸಲಾದ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟನ್ನು 2022ರ ಅಕ್ಟೋಬರ್ ನಲ್ಲಿ ಬಿಡುಗಡೆ ಮಾಡಲಾಗಿತ್ತು. ಇದರ ಆಧಾರದ ಮೇಲೆ ರಾಜ್ಯಕ್ಕೆ ತಕ್ಕಂತೆ ಬುನಾದಿ ಹಂತದ ಶಿಕ್ಷಣ ಅನುಷ್ಠಾನಕ್ಕೆ ಸಂಬಂಧಿಸಿದ ಇಲಾಖೆಗಳ ಉಪಯೋಗಕ್ಕಾಗಿ ರಾಜ್ಯ ಪಠ್ಯಕ್ರಮ ಚೌಕಟ್ಟು ರೂಪಿಸಲಾಗಿದೆ. ಅಂಗನವಾಡಿಗಳಲ್ಲಿ ಇರುವ ಚಿಲಿಪಿಲಿ ಪ್ರಾಥಮಿಕ ಶಾಲೆಗಳಲ್ಲಿ ಪದ್ಧತಿಯ ಪಠ್ಯಕ್ರಮದಲ್ಲಿ ಮಾರ್ಪಾಡು ಪ್ರಸ್ತಾಪಿಸಲಾಗಿದೆ.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ