ರೇಣುಕಾ ಸ್ವಾಮಿ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಒತ್ತಾಯ

Sampriya

ಮಂಗಳವಾರ, 11 ಜೂನ್ 2024 (16:54 IST)
Photo Courtesy X
ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ 13 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದು ಗಂಭೀರ ಪ್ರಕರಣವಾಗಿದ್ದು, ಅದನ್ನು ಸಿಬಿಐಗೆ ವಹಿಸುವಂತೆ ಬೇಡ ಜಂಗಮ ಸಮುದಾಯದವರು ಒತ್ತಾಯಿಸಿದ್ದಾರೆ.

 ಬೇಡ ಜಂಗಮ ಸಮುದಾಯದ ಜಿಲ್ಲಾಧ್ಯಕ್ಷ ಎಂ.ಟಿ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ,  ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಹಾಗೂ ಗೆಳತಿ ಪವಿತ್ರಗೌಡ ಸೇರಿ 13 ಮಂದಿ ಬಂಧಿಯಾಗಿದ್ದಾರೆ. ಇದೀಗ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಒತ್ತಾಯ ಮಾಡುತ್ತೇವೆ ಎಂದರು.

ದರ್ಶನ್ ಪ್ರಭಾವಿಯಾಗಿದ್ದು, ಪ್ರಭಾವ ಬೀರಿ ಹೊರಗೆ ಬರಬಹುದು. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ಕೊಡಬೇಕು. ನಮ್ಮ ಸಮುದಾಯದ ಸ್ವಾಮೀಜಿಗಳು ಕರೆ ಮಾಡಿ ಮಾಹಿತಿ ಪಡೆದಿದ್ದಾರೆ.ಅವರೊಟ್ಟಿಗೆ ಚರ್ಚಿಸಿ ಮುಂದಿನ ಕ್ರಮವಹಿಸಲಾಗುತ್ತದೆ ಎಂದರು.

ರೇಣುಕಾ ಸ್ವಾಮಿ ಮನೆಗೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕಿ ಭಾವನಾ ಬೆಳಗೆರೆ ಭೇಟಿ ನೀಡಿದರು. ಹಿರಿಯೂರು ಖಾಸಗಿ ಕಾರ್ಯಕ್ರಮಕ್ಕೆ ಬಂದಿದ್ದ ಭಾವನಾ, ವಿಷಯ ತಿಳಿದು ರೇಣುಕಾಸ್ವಾಮಿ ಮನೆಗೆ ಭೇಟಿ ಕೊಟ್ಟರು. ಮೃತನ ಪತ್ನಿ ಸಹನಾಗೆ ಸಾಂತ್ವನ ಹೇಳಿದರು.

 ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಎಂಬ 28 ವರ್ಷದ ಯುವಕನ ಕೊಲೆ ಪ್ರಕರಣದಲ್ಲಿ ದರ್ಶನ್‌ ಅವರನ್ನು ಬಂಧಿಸಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ