ಬಿ ಆರ್ ಟಿ ಹುಲಿಯೋಜನೆ ವಿಭಾಗದಿಂದ ಅರಣ್ಯ ಇಲಾಖೆಯ ಹುತಾತ್ಮರ ದಿನಾಚರಣೆ ನಡೆಯಿತು.
ಚಾಮರಾಜನಗರದ ಅರಣ್ಯ ಸಸ್ಯ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಹುತಾತ್ಮರ ದಿನಾಚರಣೆಯಲ್ಲಿ ಜಿಲ್ಲಾ ನ್ಯಾಯಾಧೀಶ ಬಸವರಾಜ್ ಹುತಾತ್ಮರ ಸ್ಮಾರಕಕ್ಕೆ ಗೌರವ ವಂದನೆ ಸಲ್ಲಿಸಿದರು.
ಇದಕ್ಕೂ ಮೊದಲು ಪೊಲೀಸ್ ಸಿಬ್ಬಂದಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಿದರು. ಈ ವೇಳೆ ಮಾತನಾಡಿದ ನ್ಯಾಯಾಧೀಶ ಬಸವರಾಜ್, ಚಾಮರಾಜನಗರದಲ್ಲಿ ಅರಣ್ಯ ಪ್ರದೇಶಕ್ಕನುಗುಣವಾಗಿ ಸಿಬ್ಬಂದಿ ಕೊರತೆ ಇದೆ. ಅರಣ್ಯದಲ್ಲಿ ನಡೆಯುವ ಅಕ್ರಮವನ್ನು ತಡೆಗಟ್ಟಲು ಹಾಗೂ ಸಿಬ್ಬಂದಿಯ ರಕ್ಷಣೆಗಾಗಿ ಅಗತ್ಯ ಶಸ್ತ್ರಾಸ್ತ್ರಗಳನ್ನು ನೀಡಿದರೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಜಿಲ್ಲಾ ಪಂಚಾಯಿತಿ ಸಿಇಒ ಹರೀಶ್ ಕುಮಾರ್, ಎಸ್ಪಿ ಧರ್ಮೇಂದ್ರ ಕುಮಾರ್ ಮೀನಾ, ಡಿಸಿಎಫ್ ಶಂಕರ್ ಕಾರ್ಯಕ್ರಮದಲ್ಲಿದ್ದರು.