ಕಾಡ್ಗಿಚ್ಚು : ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ?
ಚಿಕ್ಕಮಗಳೂರು -ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಪ್ರಕೃತಿ ಸೌಂದರ್ಯದ ನೆಲೆಬೀಡು. ಮುಗಿಲೆತ್ತರದ ಬೆಟ್ಟ-ಗುಡ್ಡಗಳು ನೋಡುಗರನ್ನು ಕೈಬಿಸಿ ಕರೆಯುತ್ತಿವೆ.
ಆದರೆ ಬಾಳೂರು ಮೀಸಲು ಅರಣ್ಯ ವ್ಯಾಪ್ತಿಯ ಸೋಮನಕಾಡು ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಕೊಟ್ಟಿದ್ದು ನೂರಾರು ಎಕರೆ ಅರಣ್ಯ ಸುಟ್ಟು ಕರಕಲಾಗಿದೆ.
ದಟ್ಟಕಾನನವಾದ ಕಾರಣ ಅರಣ್ಯ ಅಧಿಕಾರಿಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಅರಣ್ಯಕ್ಕೆ ಬೆಂಕಿ ತಗುಲಿದ ಪರಿಣಾಮ ನೂರಾರು ಜಾತಿಯ ಸಾವಿರಾರು ಮರಗಿಡಗಳು, ಪ್ರಾಣಿ-ಪಕ್ಷಿಗಳು ಕೂಡಾ ಬೆಂಕಿಯಲ್ಲಿ ಸುಟ್ಟು ಕರಕಲಾಗಿವೆ.