ಕಾಡಾನೆಗಳ ದಾಳಿಗೆ ಬೆಳೆ ನಾಶ!

ಮಂಗಳವಾರ, 5 ಸೆಪ್ಟಂಬರ್ 2023 (15:00 IST)
ಚನ್ನಪಟ್ಟಣದಲ್ಲಿ ಕಾಡಾನೆಗಳ ದಾಳಿಗೆ ರೈತರ ಬೆಳೆಗಳು ಸಂಪೂರ್ಣ ನಾಶವಾಗಿರೋ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೈರಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಉಮೇಶ್ - ತಮ್ಮಣ್ಣ ಎಂಬುವರ ತೋಟಕ್ಕೆ ನುಗ್ಗಿರುವ ಕಾಡಾನೆಗಳು ಸುಮಾರು 2 ಎಕರೆಯಲ್ಲಿ ಬೆಳೆದಿದ್ದ ಮಾವು ಹಾಗೂ 1 ಎಕರೆಯಲ್ಲಿದ್ದ ಟೊಮ್ಯಾಟೊ ಬೆಳೆಗಳನ್ನ ನಾಶ ಮಾಡಿದೆ. ತಡರಾತ್ರಿ ಜಮೀನಿಗೆ ನುಗ್ಗಿರುವ ಕಾಡಾನೆಗಳ ಹಿಂಡು ಮಾವಿನ ಮರಗಳನ್ನ ಮುರಿದು, ಟೊಮ್ಯಾಟೊ ಬೆಳೆಗಳನ್ನ ತುಳಿದು ನಾಶ ಮಾಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ