ಕೋವಿಡ್ ನಿಯಮ ಗಾಳಿಗೆ ತೂರಿ ನ್ಯೂ ಇಯರ್ ಸೆಲೆಬ್ರೇಷನ್ ಜೋರು

ಶನಿವಾರ, 1 ಜನವರಿ 2022 (15:55 IST)
ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಕಣ್ವ ಜಲಾಶಯ ಬಳಿಯ ರೆಸಾರ್ಟ್, ಪ್ರಕೃತಿಯ ಸೊಬಗನ್ನು ಸವಿಯುವಂತಹರಿಗೆ ಹೇಳಿ ಮಾಡಿಸಿದ ಜಾಗ. ಆದರೆ ಇಂತಹ ಜಾಗದಲ್ಲಿ ಕೋವಿಡ್ ಮತ್ತು ನೈಟ್ ಕರ್ಫ್ಯೂ ನಿಯಮ ಉಲ್ಲಂಘಿಸಿ, ಹೊಸ ವರ್ಷದ ಸಂಭ್ರಮಾಚರಣೆ ತೊಡಗಿದ್ದವರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ನ್ಯೂ ಇಯರ್ ಸೆಲೆಬ್ರೇಷನ್‌ಗೆ ಬ್ರೇಕ್ ಬಿದ್ದ ಹಿನ್ನಲೆಯಲ್ಲಿ ಬೆಂಗಳೂರು ಮತ್ತಿತರ ಕಡೆಯಿಂದ ನೂರಾರು ಸಂಖ್ಯೆಯಲ್ಲಿ ಜನರು ಇಲ್ಲಿಗೆ ಬಂದು ಮೋಜು ಮಸ್ತಿಯಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಸಂಭ್ರಮಾಚರಣೆಗೆ ಬ್ರೇಕ್ ಹಾಕಿದಲ್ಲದೇ ರೆಸಾರ್ಟ್ ಮಾಲೀಕನ ವಿರುದ್ಧ ಕೇಸ್ ದಾಖಲಿಸಿದ್ದಾರೆ.
 
ಓಮಿಕ್ರಾನ್ ವೈರಸ್, ಕೋವಿಡ್ 3ನೇ ಅಲೆ ಭೀತಿಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನ್ಯೂ ಇಯರ್ ಸೆಲೆಬ್ರೇಷನ್‌ಗೆ ಬ್ರೇಕ್ ಹಾಕಿ ಕಠಿಣ ನಿಯಮಗಳನ್ನು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಮನಗರ ಜಿಲ್ಲೆಯ ಕಣ್ವ ಜಲಾಶಯದ ಸಮೀಪದ ಟ್ರೀಕ್ಯೂಟ್ರಾ ರೆಸಾರ್ಟ್‌ನಲ್ಲಿ ಈ ಟಫ್ ರೂಲ್ಸ್‌ಗಳನ್ನು ಗಾಳಿಗೆ ತೂರಿ ಪಾರ್ಟಿ ಅಯೋಜಿಸಲಾಗಿತ್ತು.
 
ಇನ್ನು ಆನ್‌ಲೈನ್ ಬುಕ್ಕಿಂಗ್ ಮೂಲಕ ನ್ಯೂ ಇಯರ್ ಸೆಲೆಬ್ರೇಷನ್ ಪಾರ್ಟಿಗೆ ರೆಸಾರ್ಟ್ ಸರ್ವ ರೀತಿಯಲ್ಲೂ ತಯಾರಾಗಿತ್ತು. ಅಲ್ಲದೇ ಬೆಟ್ಟಗುಡ್ಡಗಳ ತಪ್ಪಲು, ಹಸಿರಿನಿಂದ ಕಂಗೊಳಿಸುತ್ತಿರುವ ಕಣ್ವ ಜಲಾಶಯದ ಬ್ಯಾಕ್ ವಾಟರ್ ಬಳಿಯ ರೆಸಾರ್ಟ್‌ನಲ್ಲಿ ಪಾರ್ಟಿ ಎಂದಾಗ ಜನ ತಾ ಮುಂದು, ನಾ ಮುಂದು ಎಂಬಂತೆ ಇಲ್ಲಿಗೆ ಆಗಮಿಸಿ ಮದ್ಯದ ನಶೆಯಲ್ಲಿ ಮೈಮರೆತು ಸೆಲೆಬ್ರೇಷನ್‌ಗೆ ಮುಂದಾಗಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ