ಮೈಸೂರು ಕೋರ್ಟ್‌ ಸ್ಫೋಟ: ಪೊಲೀಸ್ ನೈತಿಕತೆ ಕುಸಿದಿರುವುದಕ್ಕೆ ಸಾಕ್ಷಿ: ಎಸ್‌.ಎ.ರಾಮದಾಸ್

ಬುಧವಾರ, 3 ಆಗಸ್ಟ್ 2016 (11:09 IST)
ಮೈಸೂರು ಜಿಲ್ಲಾ ಕೋರ್ಟ್ ಶೌಚಾಲಯದಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂದಿಸಿದಂತೆ ಪೊಲೀಸ್ ಬೀಗಿ ಭದ್ರತೆ ನಡುವೆಯೇ  ನಿಗೂಢ ಸ್ಫೋಟ ಸಂಭವಿಸಿರುವುದು ಅವರ ನೈತಿಕತೆ ಕುಸಿದಿರುವುದಕ್ಕೆ ಪ್ರತ್ಯಕ್ಷ ಸಾಕ್ಷಿಯಾಗಿದೆ ಎಂದು ಮಾಜಿ ಸಚಿವ ಎಸ್‌.ಎ.ರಾಮದಾಸ್ ಬೇಸರ ವ್ಯಕ್ತಪಡಿಸಿದ್ದಾರೆ.
 
ವಿಜಯಪುರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮೈಸೂರು ಜಿಲ್ಲಾ ಕೋರ್ಟ್‌ ಶೌಚಾಲಯದಲ್ಲಿ ನಿಗೂಢ ಸ್ಫೋಟ ಸಂಭವಿಸಿರುವುದು ಅವರ ನೈತಿಕತೆಗೆ ಪ್ರತ್ಯಕ್ಷ ಸಾಕ್ಷಿಯಾಗಿದೆ. ಪೊಲೀಸ್ ಇಲಾಖೆಯಲ್ಲಿ ಶೀತಲ ಸಮರ ನಡೆದಿದೆ ಎಂದು ತಿಳಿಸಿದರು.
 
ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರು ಮಧ್ಯಸ್ಥಿಕೆ ವಹಿಸಬೇಕು. ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ ಮಹದಾಯಿ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕು. ಹಾಗೂ ವಿಪಕ್ಷ ನಾಯಕರನ್ನು ಸೇರಿಸಲು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಮುಂದಾಗಲಿ ಎಂದು ಮಾಜಿ ಸಚಿವ ಎಸ್‌.ಎ.ರಾಮದಾಸ್ ಆಗ್ರಹಿಸಿದ್ದಾರೆ.

 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ