ಕಾಶ್ಮೀರ ವಿಚಾರದಲ್ಲಿ ಮೋದಿ ಮಹಾಮೌನಿ: ಯು.ಟಿ.ಖಾದರ್

ಮಂಗಳವಾರ, 20 ಸೆಪ್ಟಂಬರ್ 2016 (10:26 IST)
ಕಾಶ್ಮೀರ ವಿಚಾರದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಬಿಜೆಪಿ ಮೌನಿ ಎಂದು ಹೇಳುತ್ತಿತ್ತು. ಆದರೆ, ಇದೀಗ ಕಾಶ್ಮೀರ ವಿಚಾರದಲ್ಲಿ ಪ್ರಧಾನಿ ಮೋದಿ ಮಹಮೌನಿಯಾಗಿದ್ದಾರೆ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಖಾತೆ ಸಚಿವ ಯು.ಟಿ.ಖಾದರ್ ಲೇವಡಿ ಮಾಡಿದ್ದಾರೆ.
 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಪಾಕಿಸ್ತಾನ ಪ್ರಧಾನಿಯನ್ನು ಆಹ್ವಾನಿಸಿದ್ದರು. ಹಾಗೂ ಪಾಕ್ ಪ್ರಧಾನಿ ಮೊಮ್ಮಗಳ ಮದುವೆಯಲ್ಲಿ ಭಾಗವಹಿಸಿದ್ದರು. ಜಮ್ಮು-ಕಾಶ್ಮೀರದ ಉರಿಯಲ್ಲಿ ನಡೆದ ಭಯೋತ್ಪಾದಕರ ಕೃತ್ಯ ಗಂಭೀರ ಸ್ವರೂಪ ಪಡೆದುಕೊಳ್ಳುವವರೆಗೂ ಪ್ರಧಾನಿ ಏನು ಮಾಡುತ್ತಿದ್ದರು. ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು. ಪಾಕ್ ಕುರಿತು ಪ್ರಧಾನಿ ಮೋದಿ ಅವರು ತಮ್ಮ ನಿಲುವು ಏನೆಂದು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು. 
 
ಜಮ್ಮು-ಕಾಶ್ಮೀರದ ಉರಿಯಲ್ಲಿ ನಡೆದ ಘಟನೆ ದೇಶದ ವೈಪಲ್ಯ. ಇದರಿಂದ ದೇಶದ ಜನತೆ ಹಾಗೂ ಸೈನಿಕರ ಮಾನಸಿಕ ಸ್ಥೈರ್ಯ ಕುಸಿಯುವಂತಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಬೇಸರ ವ್ಯಕ್ತಪಡಿಸಿದರು. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ