ಚುನಾವಣಾ ಆಯುಕ್ತರ ನೇಮಕಕ್ಕೆ ಸಮಿತಿ ರಚನೆ

ಶನಿವಾರ, 4 ಮಾರ್ಚ್ 2023 (08:57 IST)
ಕೇಂದ್ರ ಸರ್ಕಾರದ ಬಳಿ ಇದ್ದ ಅಧಿಕಾರವನ್ನು ಸಾಂವಿಧಾನಿಕ ಪೀಠ ಕಿತ್ತುಕೊಂಡು ಐತಿಹಾಸಿಕ ತೀರ್ಪು ನೀಡಿದೆ.
 
ಪ್ರಕರಣ ಸುಧೀರ್ಘ ವಿಚಾರಣೆ ನಡೆಸಿದ್ದ ನ್ಯಾ. ಕೆ.ಎಂ ಜೋಸೆಫ್, ನ್ಯಾ. ಅಜಯ್ ರಸ್ತೋಗಿ, ನ್ಯಾ. ಅನಿರುದ್ಧ ಬೋಸ್, ನ್ಯಾ. ಹೃಷಿಕೇಶ್ ರಾಯ್ ಮತ್ತು ನ್ಯಾ. ಸಿ.ಟಿ ರವಿ ಕುಮಾರ್ ಅವರನ್ನೊಳಗೊಂಡ ಸಂವಿಧಾನ ಪೀಠವು ಈ ಮಹತ್ವದ ಆದೇಶ ನೀಡಿದೆ. 

ಕಾನೂನಿನ ನಿಯಮವನ್ನು ಖಾತರಿಪಡಿಸದ ಚುನಾವಣಾ ಆಯೋಗವು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಅದರ ವ್ಯಾಪಕವಾದ ಅಧಿಕಾರಗಳಲ್ಲಿ ಕಾನೂನುಬಾಹಿರವಾಗಿ ಅಥವಾ ಅಸಾಂವಿಧಾನಿಕವಾಗಿ ನಡೆದುಕೊಂಡರೆ ಅದು ರಾಜಕೀಯ ಪಕ್ಷಗಳ ಫಲಿತಾಂಶಗಳ ಮೇಲೆ ಪರಿಣಾಮ ಬೀರಲಿದೆ. 

ಚುನಾವಣಾ ಆಯೋಗವು ಸ್ವತಂತ್ರವಾಗಿರಬೇಕು, ರಾಜ್ಯಕ್ಕೆ ಬಾಧ್ಯತೆಯ ಸ್ಥಿತಿಯಲ್ಲಿರುವ ವ್ಯಕ್ತಿಯು ಸ್ವತಂತ್ರ ಮನಸ್ಥಿತಿಯನ್ನು ಹೊಂದಲು ಸಾಧ್ಯವಿಲ್ಲ. ಸ್ವತಂತ್ರ ವ್ಯಕ್ತಿ ಅಧಿಕಾರದಲ್ಲಿರುವವರಿಗೆ ಅಕ್ರಮ ನಡೆಯುವುದಿಲ್ಲ. ಹಲವಾರು ದಶಕಗಳು ಕಳೆದಿವೆ. ಆದರೂ ರಾಜಕೀಯ ಪಕ್ಷಗಳು ಇಸಿಐಗೆ ನೇಮಕಾತಿಗಳನ್ನು ನಿಯಂತ್ರಿಸಲು ಪ್ರತ್ಯೇಕ ಕಾನೂನನ್ನು ಪರಿಚಯಿಸಿಲ್ಲ ಎಂದು ಆದೇಶದಲ್ಲಿ ಸುಪ್ರೀಂ ತೀರ್ಪಿನಲ್ಲಿ ಉಲ್ಲೇಖಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ