ಮದರಸಾ ಶಿಕ್ಷಣಕ್ಕೆ ವಿಶೇಷ ಮಂಡಳಿ ರಚನೆ

ಗುರುವಾರ, 25 ಆಗಸ್ಟ್ 2022 (10:25 IST)
ಬೆಂಗಳೂರು : ರಾಜ್ಯದ ಮದರಸಾಗಳ ಶಿಕ್ಷಣದ ಚಟುವಟಿಕೆಗಳ ಮೇಲೆ ನಿಗಾವಹಿಸಲು ಸರ್ಕಾರ ಮುಂದಾಗಿದೆ. ಮದರಸಾಗಳ ಶಿಕ್ಷಣ ವ್ಯವಸ್ಥೆಗಾಗಿ ವಿಶೇಷ ಮಂಡಳಿ ರಚನೆಗೆ ನಿರ್ಧರಿಸಲಾಗಿದೆ.

ಬುಧವಾರ ಶಿಕ್ಷಣ ಸಚಿವ ನಾಗೇಶ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಂಪೂರ್ಣ ಮದರಸಗಳ ಮಾಹಿತಿ ಪಡೆಯಲು ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ರಾಜ್ಯದ ಮದರಸಾಗಳ ಕುರಿತು 15 ದಿನಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಅಧಿಕಾರಿಗಳ ವರದಿ ಬಳಿಕ ಮುಂದಿನ ತೀರ್ಮಾನ ಮಾಡಲು ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ.

ಮದರಸಾ ಶಿಕ್ಷಣದ ಬಗ್ಗೆ ಕರ್ನಾಟಕ ದಲ್ಲಿ ದೊಡ್ಡ ಮಟ್ಟದಲ್ಲಿ ಹಿಂದೂಸಂಘಟನೆಗಳು ಕೆಲ ಕಮಲ ನಾಯಕರು ಸಿಡಿದೆದ್ದಿದ್ದರು. ಮದರಸಾದಲ್ಲಿ ಭಯೋತ್ಪಾದನೆಯ ಪಾಠ ಹೇಳಲಾಗುತ್ತಿದೆ. ಇಸ್ಲಾಂ ಮೂಲಭೂತವಾದ ಕಲಿಸಿಕೊಡಲಾಗುತ್ತದೆ.

ಅಂಕುಶ ಹಾಕಿ ಇಲ್ಲವೇ ಬ್ಯಾನ್ ಮಾಡಿ ಎನ್ನುವ ಕೂಗು ದೊಡ್ಡದಾಗಿ ಕೇಳಿಬಂದಿತ್ತು. ಬಿಜೆಪಿ ಮುಖಂಡ ಸಿಟಿ ರವಿ ಟ್ವೀಟ್ ಮಾಡಿ ಮದರಸಾ ಶಿಕ್ಷಣದ ಬಗ್ಗೆ ಬಹಿರಂಗ ಆಕ್ಷೇಪ ವ್ಯಕ್ತಪಡಿಸಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ