ಕರ್ಣಾಟಕ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಪೊಳಲಿ ಜಯರಾಂ ಭಟ್ ಹೃದಯಾಘಾತದಿಂದ ನಿಧನ

ಗುರುವಾರ, 10 ಆಗಸ್ಟ್ 2023 (08:45 IST)
ಮಂಗಳೂರು : ಕರ್ಣಾಟಕ ಬ್ಯಾಂಕ್ನ ಮಾಜಿ ಅಧ್ಯಕ್ಷ ಪೊಳಲಿ ಜಯರಾಂ ಭಟ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಹಠಾತ್ ಹೃದಯಾಘಾತಕ್ಕೆ ಒಳಗಾದ ಜಯರಾಂ ಭಟ್ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. 

ಜಯರಾಂ ಭಟ್ ಅವರು ಬ್ಯಾಂಕಿಂಗ್ ಕಾರ್ಯಾಚರಣೆಗಳ ಎಲ್ಲಾ ಅಂಶಗಳಲ್ಲಿ ಅಪಾರ ಅನುಭವ ಹೊಂದಿದ್ದರು. 2009ರ ಜುಲೈ 14 ರಂದು ಬ್ಯಾಂಕ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಉತ್ತಮ ಕಾರ್ಯ ನಿರ್ವಹಿಸಿದ್ದರು.

ಅನಂತಕೃಷ್ಣ ಅವರ ನಂತರ ಅರೆಕಾಲಿಕ ನಾನ್-ಎಕ್ಸಿಕ್ಯೂಟಿವ್ ಚೇರ್ಮನ್ ಆಗಿ ಅಧಿಕಾರ ವಹಿಸಿಕೊಂಡು ಸೇವೆ ಸಲ್ಲಿಸಿದ್ದರು. ರಸಾಯನಶಾಸ್ತ್ರದಲ್ಲಿ ಎಂಎಸ್ಸಿ ಪದವಿ ಪಡೆದಿದ್ದ ಭಟ್ ಅವರು ಬ್ಯಾಂಕಿಂಗ್ ಕ್ಷೇತ್ರಕ್ಕೆ ಬಂದು ಅಚ್ಚರಿ ಮೂಡಿಸುವಂತೆ ಸಾಧನೆ ಮಾಡಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ