ಬೆಂಗಳೂರು ನಗರದಲ್ಲಿ ಪಕ್ಷ ಸಂಘಟನೆಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತು

ಗುರುವಾರ, 1 ಜೂನ್ 2023 (14:40 IST)
ಸಂಘಟನೆ ಹಾಗೂ ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಮಹಾನಗರದ ಮುಖಂಡರ ಜತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದಾರೆ.ಬಿಬಿಎಂಪಿ ಚುನಾವಣೆಗೆ ಪಕ್ಷ ಸಜ್ಜುಗೊಳಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ.
 
ನಗರದ ಪ್ರಮುಖ ಮುಖಂಡರು, ನಾಯಕರ ಜತೆ ಬಿಡದಿ ತೋಟದಲ್ಲಿ ಸಭೆ ನಡೆಸಲಾಗಿದೆ.ಮುಖಂಡರಿಂದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಲಹೆ ಪಡೆದಿದ್ದಾರೆ.ಪಕ್ಷ ಸಂಘಟನೆ ದೃಷ್ಟಿಯಿಂದ ಕಠಿಣ ಸೂಚನೆಗಳನ್ನ ಕುಮಾರಸ್ವಾಮಿ ಕೊಟ್ಟಿದ್ದಾರೆ.
 
ವಿಧಾನಸಭೆ ಚುನಾವಣೆ ವೈಫಲ್ಯಗಳಿಂದ ಪಾಠ ಕಲಿಯುವಂತೆ ತಾಕೀತು ಮಾಡಿದ್ದು,ಮಾಡಿದ ತಪ್ಪನ್ನೇ ಮತ್ತೆ ಮಾಡಬೇಡಿ ಎಂದು ಹೇಳಿದ್ದಾರೆ.ವಿಧಾನ ಪರಿಷತ್ ಸದಸ್ಯ ಕೆ.ಎನ್.ತಿಪ್ಪೇಸ್ವಾಮಿ, ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಮುಖಂಡರಾದ ರಾಜಣ್ಣ, ಅರಮನೆ ಶಂಕರ್, ಹೆಚ್.ಎನ್. ದೇವರಾಜ್,ಗಂಗಾಧರ ಮೂರ್ತಿ, ಭದ್ರೆಗೌಡ, ಇಮ್ರಾನ್ ಪಾಷಾ ಸೇರಿದಂತೆ 28 ವಿಧಾನಸಭೆ ಕ್ಷೇತ್ರಗಳ ಪ್ರಮುಖ ಮುಖಂಡರು ಭಾಗಿಯಾಗಿದ್ದರು.
 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ