ಪತ್ನಿ ಸಮೇತರಾಗಿ ಅಮಾವಾಸ್ಯೆ ಪೂಜೆ ನೆರವೇರಿಸಿದ ಕುಮಾರಸ್ವಾಮಿ
ಮಾಜಿ ಸಿಎಂ ಕುಮಾರಸ್ವಾಮಿ ಪತ್ನಿ ಸಮೇತರಾಗಿ ಇವತ್ತು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿ ಚುಂಚನಗಿರಿಗೆ ಭೇಟಿ ನೀಡಿದ್ದರು. ಈ ಸಂದರ್ಭ ದಂಪತಿ ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಅಮಾವಾಸ್ಯೆ ಪೂಜೆ ನೆರವೇರಿಸಿದ್ದಾರೆ.
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಗದ್ದುಗೆ ಏರಲು ರಾಜ್ಯದ ಹಲವೆಡೆ ಕುಮಾರಸ್ವಾಮಿ ಪ್ರವಾಸ ಮಾಡಿದ್ದಾರೆ. ಹೀಗಾಗಿ, ಪಕ್ಷದ ಜಯಕ್ಕಾಗಿ ಪ್ರಾರ್ಥಿಸಿ ಕಾಳಭೈರವೇಶ್ವರನ ಮೊರೆ ಹೋಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಕುಮಾರಸ್ವಾಮಿ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.