ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಎಸ್.ಎಂ. ಶಂಕರ್ ಇಂದು ನಿಧನರಾಗಿದ್ದಾರೆ.
ಇವರಿಗೆ 83 ವರ್ಷ ವಯಸ್ಸಾಗಿದ್ದು, ಹಲವು ದಿನಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಈ ಹಿನ್ನಲೆಯಲ್ಲಿ ಇವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಎಸ್.ಎಂ.ಶಂಕರ್ ಅವರು ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದರು. ಅವರ ಅಂತ್ಯಕ್ರಿಯೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಅವರ ಸ್ವಗ್ರಾಮ ಸೋಮನಹಳ್ಳಿಯಲ್ಲಿ ನಡೆಯಲಿದೆ.