ಮಾಜಿ ಸಿಎಂ ಎಸ್‌ಎಂ ಕೃಷ್ಣ ಆಸ್ಪತ್ರೆಗೆ ದಾಖಲು, ಹೆಲ್ತ್‌ ಅಪ್‌ಡೇಟ್ ಹೀಗಿದೆ

Sampriya

ಶನಿವಾರ, 19 ಅಕ್ಟೋಬರ್ 2024 (19:01 IST)
Photo Courtesy X
ಬೆಂಗಳೂರು: ವಯೋಸಹಜ ಅನಾರೋಗ್ಯ ಸಮಸ್ಯೆ ಕಾರಣ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಇಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಾ.ಸತ್ಯನಾರಾಯಣ ಹಾಗೂ ಡಾ.ಸುನೀಲ್ ಕಾರಂತ ನೇತೃತ್ವದ ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ.

ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಸೋಮವಾರ ಡಿಸ್ಚಾರ್ಜ್ ಆಗುವ ನಿರೀಕ್ಷೆಯಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.

92 ವರ್ಷದ ಎಸ್ಎಂ ಕೃಷ್ಣ ಅವರು, 2009ರಿಂದ 2012ರವರೆಗೆ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರು ಭಾರತೀಯ ಜನತಾ ಪಕ್ಷಕ್ಕೆ ಸೇರಿದ್ದಾರೆ.  

ಉಸಿರಾಟದ ಸಮಸ್ಯೆಯಿಂದ ಈ ಹಿಂದೆ ತಿಂಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ