ಅನಾರೋಗ್ಯದ ನಡುವೆಯೂ ಇಂದು ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿಲಿರುವ ಮಾಜಿ ಸಿಎಂ

ಶನಿವಾರ, 10 ಆಗಸ್ಟ್ 2019 (10:38 IST)
ಬೆಂಗಳೂರು : ರಾಜ್ಯದೆಲ್ಲೆಡೆ ಸುರಿಯುತ್ತಿರುವ ಮಹಾಮಳೆಗೆ ಇಡೀ ರಾಜ್ಯವೇ ತತ್ತರಿಸಿ ಹೋಗಿದೆ. ಈ ಹಿನ್ನಲೆಯಲ್ಲಿ ಇಂದು ಮಾಜಿ ಸಿಎಂ ಎಚ್‍ ಡಿ ಕುಮಾರಸ್ವಾಮಿ ಅವರು ಪ್ರವಾಹ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.
ಜ್ವರದಿಂದ ಬಳಲುತ್ತಿರುವ ಕಾರಣ ನೆರೆಸಂತ್ರಸ್ತರನ್ನು ಭೇಟಿ ಮಾಡಲು ಸಾಧ್ಯವಾಗಲಿಲ್ಲ ಎಂದು ಟ್ವೀಟ್ ಮಾಡಿದ ಮಾಜಿ ಸಿಎಂ ಇದೀಗ ರಾಜ್ಯದ ಜನರು ನೆರೆಯಿಂದ ಕಂಡು ನನ್ನ ಮನಸ್ಸು ತುಡಿಯುತ್ತಿದೆ. ಆದಕಾರಣ ಇಂದು ಪ್ರವಾಹ ಸ್ಥಳಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸುವುದಾಗಿ ಟ್ವೀಟ್ ಮೂಲಕ ತಿಳಿಸಿದ್ದಾರೆ.


ಇಂದು ಅವರು ಬೆಳಗಾವಿ, ಸಂಕೇಶ್ವರ, ಚಿಕ್ಕೋಡಿ, ನವಲಗುಂಡ ಹಾಗೂ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನ ಆಲಿಸಲಿರುವ ಮಾಜಿ ಸಿಎಂ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ತೆರಳಿ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಸ್ವೀಕರಿಸಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ