ಬಿಜೆಪಿಗೆ ಸೇರ್ಪಡೆಗೊಂಡ ಕಾಂಗ್ರೆಸ್ ನ ಮಾಜಿ ಸಚಿವ ಎ.ಮಂಜು

ಸೋಮವಾರ, 18 ಮಾರ್ಚ್ 2019 (10:00 IST)
ಹಾಸನ : ಚುನಾವಣೆಗೆ ಹಾಸನ ಕ್ಷೇತ್ರದಿಂದ  ದೇವೇಗೌಡರು ಸ್ಪರ್ಧಿಸದ ಹಿನ್ನಲೆಯಲ್ಲಿ ಬೇಸರಗೊಂಡಿದ್ದ ಕಾಂಗ್ರೆಸ್ ನ ಮಾಜಿ ಸಚಿವ ಎ.ಮಂಜು ಅವರು ಕೊನೆಗೂ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.


ನಿನ್ನೆ ಸಂಜೆ ವೇಳೆಗೆ ದಿಢೀರ್ ಎಂದು ಹಾಸನದ ಆರ್ ಪುರಂ ನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದ ಎ.ಮಂಜು ಅವರು, ತರಾತುರಿಯಲ್ಲಿ ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದರು. ಆ ಮೂಲಕ ಅಧಿಕೃತವಾಗಿ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರ್ಪಡೆಯಾಗಿದ್ದಾರೆ.


ಹಾಸನ ಶಾಸಕ ಪ್ರೀತಂ ಗೌಡ ಅವರು ಬಿಜೆಪಿ ಶಾಲು ಹೊದಿಸಿ, ಪಕ್ಷದ ಬಾವುಟ ನೀಡಿ ಸ್ವಾಗತ ನೀಡಿದರು. ಇಂದು  ರಾಜ್ಯ ನಾಯಕರ ಸಮ್ಮುಖದಲ್ಲಿ ಅಧಿಕೃತವಾಗಿ ಮಂಜು ಅವರ ಸೇರ್ಪಡೆ ಬಗ್ಗೆ ಘೋಷಣೆಯಾಗಲಿದೆ. ಹಾಗೇ ಪ್ರಜ್ವಲ್ ರೇವಣ್ಣ ವಿರುದ್ಧ ಬಿಜೆಪಿಯಿಂದ ಎ.ಮಂಜು ಅವರು ಸ್ಪರ್ಧೆ ಮಾಡುವುದು ಖಚಿತವಾಗಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ