ಮಾಜಿ ಸಚಿವ ಜಿ.ಟಿ.ದೇವೇಗೌಡರ 3 ವರ್ಷದ ಮೊಮ್ಮಗಳು ವಿಧಿವಶ

ಭಾನುವಾರ, 15 ಮೇ 2022 (16:10 IST)

ಮಾಜಿ ಸಚಿವ ಜಿಟಿ ದೇವೇಗೌಡರ ಮೂರು ವರ್ಷದ ಮೊಮ್ಮಗಳು ಅನಾರೋಗ್ಯದಿಂದ ಮೃತಪಟ್ಟಿದ್ದಾಳೆ.

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮಾಜಿ ಸಚಿವ ಜಿ.ಟಿ.ದೇವೇಗೌಡರ ಪುತ್ರ ಹಾಗೂ ಎಂಸಿಡಿಸಿಸಿ ಅಧ್ಯಕ್ಷ ಹರೀಶ್ ಗೌಡರ ಪುತ್ರಿ ಗೌರಿ (3) ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಮೃತಪಟ್ಟಿದ್ದಾಳೆ.

ಮೈಸೂರು ತಾಲೂಕಿನ ಗುಂಗಾಲ್ ಛತ್ರದಲ್ಲಿ ಮಧ್ಯಾಹ್ಷ 12 ಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯ ಸಂಸ್ಕಾರವನ್ನ ನೆರವೇರಿಸಲಾಯಿತ್ತು. ಇನ್ನು ಗೌರಿ ಸಾವಿಗೆ ರಾಜಕೀಯ ಕ್ಷೇತ್ರದ ಗಣ್ಯರು ಟ್ವೀಟ್ ಮಾಡಿ ಕಂಬನಿ ಮಿಡಿದಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂಗಳಾದ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ