ಮಾಜಿ ಸಚಿವ ಓಂಪ್ರಕಾಶ್ ಕಣಗಲಿ ನಿಧನ

ಬುಧವಾರ, 7 ನವೆಂಬರ್ 2018 (13:06 IST)
ಬೆಳಗಾವಿ : ಕಾಂಗ್ರೆಸ್ ನ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಓಂಪ್ರಕಾಶ್ ಕಣಗಲಿ (69) ಅವರು ಮಂಗಳವಾರ ಕೆಎಲ್ ಇ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.


ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು ಕೆಎಲ್ ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.


ಓಂಪ್ರಕಾಶ್ ಕಣಗಲಿ ಅವರು, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಸರ್ಕಾರದಲ್ಲಿ ನೀರಾವರಿ ಸಚಿವರಾಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಓಂಪ್ರಕಾಶ್ ಕಣಗಲಿ ಅವರು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಇಂದು ಸಂಜೆ ಹುಕ್ಕೇರಿ ತಾಲೂಕಿನ ಕಣಗಲಿ ಗ್ರಾಮದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ