ಮೈತ್ರಿ ಸರಕಾರದವರು ಹನಿಮೂನ್ ಸಮಯದಲ್ಲಿ ಡಿವೋರ್ಸಗೆ ಹೋಗಿದ್ದಾರೆಂದ ಮಾಜಿ ಸಚಿವ

ಬುಧವಾರ, 31 ಅಕ್ಟೋಬರ್ 2018 (15:25 IST)
ರಾಜ್ಯದಲ್ಲಿ ಈ ಹಿಂದಿನ ಕಾಂಗ್ರೆಸ್ ಸರಕಾರದ ಆಡಳಿತ ವೈಫಲ್ಯವನ್ನು ಜನರು ನೋಡಿದ್ದಾರೆ. ಜೆಡಿಎಸ್ -ಕಾಂಗ್ರೆಸ್ ಸರಕಾರದ ಅಪವಿತ್ರ ಮೈತ್ರಿಯಿಂದ ಅಭಿವೃದ್ಧಿಯಾಗಿಲ್ಲ. ಮೈತ್ರಿ ಸರಕಾರ ಹನಿಮೂನ್ ಸಮಯದಲ್ಲಿ ಡಿವೋರ್ಸ್ ಗೆ ಹೋಗಿದ್ದಾರೆ. ಇದರಿಂದ  ಜನ ಬೇಸತ್ತಿದ್ದಾರೆ ಎಂದು ಮಾಜಿ ಸಚಿವ ಆರೋಪ ಮಾಡಿದ್ದಾರೆ.

ಬಳ್ಳಾರಿ ಲೋಕಸಭೆ ಉಪಚುನಾವಣೆ ಹಿನ್ನೆಲೆ  ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸುದ್ದಿಗೋಷ್ಠಿ ನಡೆಸಿದ್ದಾರೆ.  ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ತದೆ. ದಿನದಿಂದ ದಿನಕ್ಕೆ ವಿಶ್ವಾಸ  ಹೆಚ್ಚಾಗುತ್ತಿದೆ. 5 ಕ್ಷೇತ್ರಗಳಲ್ಲಿ ಗೆಲ್ಲುವ ವಾತಾವರಣ ಇದೆ ಎಂದರು.

 ಪ್ರಧಾನಿ ಮೋದಿಯವರ ಕೊಡುಗೆ ಹೆಚ್ಚಿದೆ. ಈ ಕಾರಣಕ್ಕೆ ಬಿಜೆಪಿಯನ್ನು ಜನ ಬೆಂಬಲಿಸುತ್ತಿದ್ದಾರೆ. ಎಲ್ಲರೂ ಮೋದಿ ಅಂತಾರೆ, ಪ್ರಶ್ನಾತೀತ ನಾಯಕನಾಗಿ ಬೆಳೆಯುತ್ತಿದ್ದಾರೆ ಎಂದರು.

ರಾಜ್ಯ ಸರಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಕಾಗೇರಿ,  ಬಡವರ ಪರ, ರೈತರ ಪರ ಮೊಸಳೆ ಕಣ್ಣೀರು ಹಾಕ್ತಿದ್ದಾರೆ ಸಿಎಂ ಕುಮಾರಸ್ವಾಮಿ. ಅಭಿವೃದ್ಧಿ ಕೆಲಸಕ್ಕೆ ಹಣ ಬಿಡುಗಡೆಯಾಗ್ತಿಲ್ಲ. ಅತಿವೃಷ್ಠಿ, ಅನಾವೃಷ್ಠಿಗೆ ಹಣ ಬಿಡುಗಡೆ ಮಾಡ್ತಿಲ್ಲ. ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಗೊಂದಲವಾಗುತ್ತಿವೆ. ಶಿಕ್ಷಣ ಇಲಾಖೆಯ ಚಟುವಟಿಕೆ ಏನು ಅಂತಾನೇ ಗೊತ್ತಿಲ್ಲ ಎಂದು ಟೀಕೆ ಮಾಡಿದರು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ